ಚೆನ್ನೈ: ದೇಶಾದ್ಯಂತ ಸಂಚಲನ ಮೂಡಿಸಿದ್ದ, ಇನ್ಫೋಸಿಸ್ ಉದ್ಯೋಗಿ ಸ್ವಾತಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ತಿರುನಲ್ವೇಲಿಯ ಬೀಚ್ ಬಳಿ ಆರೋಪಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
22 ವರ್ಷದ ರಾಮ್ ಕುಮಾರ್ ಬಂಧಿತ ಆರೋಪಿ. ಈತ ಚೆನ್ನೈನ ನುಂಗಂಬಾಕ್ಕಮ್ ರೈಲು ನಿಲ್ದಾಣದಲ್ಲಿ ಎಂದಿನಂತೆ ಕೆಲಸಕ್ಕೆ ಹೊರಟಿದ್ದ ಸ್ವಾತಿ ಅವರನ್ನು ಕತ್ತು ಸೀಳಿ ಕೊಲೆ ಮಾಡಿದ್ದ. ಜನನಿಬಿಡ ಪ್ರದೇಶದಲ್ಲಿಯೇ ಭೀಕರವಾಗಿ ಕೊಲೆ ಮಾಡಿ, ಕ್ಷಣಾರ್ಧದಲ್ಲಿ ಪರಾರಿಯಾಗಿದ್ದ. ಈ ಪ್ರಕರಣ ದೇಶಾದ್ಯಂತ ಸುದ್ದಿಯಾಗಿ, ಆರೋಪಿಯ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತನಿಖೆ ನಡೆಸಿದ ತಮಿಳುನಾಡು ಪೊಲೀಸರು, ಹಂತಕ ರಾಮ್ ಕುಮಾರ್ ನನ್ನು ಬಂಧಿಸಿದ್ದಾರೆ.
ಪೊಲೀಸರು ಬಂಧಿಸಲು ಬರುತ್ತಿದ್ದಂತೆ ಹರಿತವಾದ ಚಾಕುವಿನಿಂದ ಆರೋಪಿ ಕತ್ತು ಕೊಯ್ದುಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆತ ಚೇತರಿಸಿಕೊಂಡ ನಂತರ, ಸ್ವಾತಿಯನ್ನು ಕೊಲೆ ಮಾಡಿದ್ದೇಕೆ ಎಂಬ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಲಿದ್ದಾರೆ.