ಬೆಂಗಳೂರು: ಬಹುಭಾಷಾ ನಟ ಕಿಚ್ಚ ಸುದೀಪ್ ಅನಾರೋಗ್ಯದ ಕಾರಣ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಚಿಕಿತ್ಸೆ ಪಡೆದುಕೊಂಡ ನಂತರ, ಸುದೀಪ್ ಮನೆಗೆ ತೆರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ-2’ ಟೀಸರ್ ರಿಲೀಸ್ ಆಗಿ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿರುವ ಚಿತ್ರವನ್ನು ಖ್ಯಾತ ನಿರ್ದೇಶಕ ಕೆ.ಎಸ್.ರವಿಕುಮಾರ್ ನಿರ್ದೇಶಿಸಿದ್ದು, ಸೂರಪ್ಪಬಾಬು ನಿರ್ಮಾಣ ಮಾಡಿದ್ದಾರೆ. ಇದೀಗ ಸುದೀಪ್ ಮೈಸೂರಿನಲ್ಲಿ ‘ಹೆಬ್ಬುಲಿ’ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಜ್ವರ ಹಾಗೂ ಆಸಿಡಿಟಿಯಿಂದ ಬಳಲಿದ್ದಾರೆ. ನಂತರ ಸುದೀಪ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸುದೀಪ್ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಅವರು ಮನೆಯಲ್ಲಿ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಸುದೀಪ್ ಅವರಿಗೆ ಯಾವುದೇ ತೊಂದರೆ ಇಲ್ಲ. ಬಳಲಿದ್ದರಿಂದ ಸುಸ್ತು ಆಗಿರಬಹುದೆಂದು ಹೇಳಲಾಗಿದೆ. ‘ಹೆಬ್ಬುಲಿ’ ಚಿತ್ರದ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.