ಪುರಿ: ಒಡಿಶಾದ ಪುರಿಯಲ್ಲಿ ಶ್ರೀ ಜಗನ್ನಾಥನ ರಥೋತ್ಸವ ವೈಭವದಿಂದ ನಡೆಯಲಿದೆ. ಸ್ವಾಮಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸಿದ್ದು, ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ವೈಭವದಿಂದ ನಡೆಯುತ್ತಿವೆ.
ಪ್ರಸಿದ್ಧ ಪುರಿ ಜಗನ್ನಾಥನ ದೇವಾಲಯದಲ್ಲಿ ಕಳೆದ ಸಲ ಕಾಲ್ತುಳಿತ ಉಂಟಾಗಿದ್ದರಿಂದ, ಈ ಬಾರಿ ದೇವಾಲಯದ ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. 9 ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿ ದೇಶ, ವಿದೇಶಗಳಿಂದಲೂ ಭಾಗವಹಿಸಲಿದ್ದಾರೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೇ, ದೇವಾಲಯಕ್ಕೆ ಸಾಗುವ ಮಾರ್ಗಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ, ನಿಗಾ ವಹಿಸಲಾಗಿದೆ.
ಇದರೊಂದಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಪ್ರತಿ ಭಕ್ತರಿಗೆ ತಲಾ 5 ಲಕ್ಷ ರೂಪಾಯಿ ಗ್ರೂಪ್ ಇನ್ಶೂರೆನ್ಸ್ ಮಾಡಿಸಲಾಗಿದೆ. ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಈಗಾಗಲೇ ಜನ ಜಾತ್ರೆಯೇ ನೆರೆದಿದ್ದು, ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಲಾಗಿದೆ.