ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್, ಸಿನಿಮಾದಲ್ಲಿ ನಟನೆಯ ಜೊತೆಗೆ ನಿರ್ಮಾಣದಲ್ಲಿಯೂ ತೊಡಗಿದ್ದಾರೆ. ಅಲ್ಲದೇ ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಶಾರುಕ್ ಖಾನ್ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಸಹ ಮಾಲೀಕರಾಗಿದ್ದಾರೆ.
ಶಾರುಕ್ ಖಾನ್ ಇದೀಗ ಫುಟ್ ಬಾಲ್ ತಂಡವೊಂದರ ಮಾಲೀಕರಾಗುವ ಬಗ್ಗೆ ಆಸಕ್ತಿ ತೋರಿದ್ದಾರೆ. ಇಂಡಿಯನ್ ಸೂಪರ್ ಲೀಗ್ ನಲ್ಲಿ ಶಾರುಕ್ ಖಾನ್, ಫುಟ್ ಬಾಲ್ ತಂಡವನ್ನು ಖರೀದಿಸುವ ಆಸಕ್ತಿ ತೋರಿದ್ದು, ಕೋಲ್ಕತಾ ಮೂಲದ ತಂಡವನ್ನು ಖರೀದಿಸುವ ನಿರೀಕ್ಷೆ ಇದೆ. ಇಂಡಿಯನ್ ಸೂಪರ್ ಲೀಗ್ 2017ರ ಆವೃತ್ತಿಯಲ್ಲಿ 10 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಂದು ವೇಳೆ ಅದು ಸಾಧ್ಯವಾದಲ್ಲಿ ಶಾರುಕ್ ಖಾನ್ ಹೊಸ ಫುಟ್ ಬಾಲ್ ತಂಡಕ್ಕೆ ಮಾಲೀಕರಾಗಲಿದ್ದಾರೆ ಎನ್ನಲಾಗಿದೆ.
ಶಾರುಕ್ ಖಾನ್ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ. ಇದರೊಂದಿಗೆ ಇಂಡಿಯನ್ ಸೂಪರ್ ಲೀಗ್ ನಲ್ಲಿ ಫುಟ್ ಬಾಲ್ ತಂಡವನ್ನು ಖರೀದಿಸಲು ಆಸಕ್ತಿ ತೋರಿದ್ದು, ಈ ಮೂಲಕ ಕ್ರೀಡೆಗೆ ಇನ್ನಷ್ಟು ಉತ್ತೇಜನ ನೀಡಲಿದ್ದಾರೆ.