ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಡ್ಯಾನ್ಸ್ ವೀಕ್ಷಿಸುತ್ತಿದ್ದ ಈ ಪೊಲೀಸ್ ಅಧಿಕಾರಿ, ಬಳಿಕ ಡ್ಯಾನ್ಸ್ ಮಾಡುತ್ತಲೇ ಎದ್ದು ಬಂದು ಆಕೆಯ ಮೇಲೆ ಹಣ ತೂರಿದ್ದಾನೆ.
ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಅದೀಗ ವೈರಲ್ ಆಗಿದೆ. ಜೊತೆಗೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ನಡೆಸಲು ಮುಂದಾಗಿದ್ದಾರೆನ್ನಲಾಗಿದೆ.