ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಜಸ್ತಾನ ಹೈಕೋರ್ಟ್, ಪ್ರಕರಣದಲ್ಲಿ ಸಲ್ಮಾನ್ ಖಾನ್ ನಿರ್ದೋಷಿಯೆಂದು ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಶಿಕ್ಷೆ ನೀಡಿದ್ದು, ಇದನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ತೀರ್ಪು ಇಂದು ಹೊರ ಬಿದ್ದಿದ್ದು, ಸಲ್ಮಾನ್ ಖಾನ್ ರನ್ನು ಖುಲಾಸೆ ಮಾಡಿದೆ.
1998 ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಚಿತ್ರೀಕರಣ ಜೋಧ್ಪುರದಲ್ಲಿ ನಡೆಯುತ್ತಿದ್ದ ವೇಳೆ ಸಮೀಪದ ಬವಾಡ್ ಬಳಿ ಒಂದು ಹಾಗೂ ಘೋಡ ಬಳಿ ಮತ್ತೊಂದು ಕೃಷ್ಣಮೃಗವನ್ನು ಬೇಟೆಯಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಹಲವು ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು ಕೆಳ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಲಾಗಿತ್ತು. ಇದೀಗ ಹೈಕೋರ್ಟ್ ನಲ್ಲಿ ಸಲ್ಮಾನ್ ಖಾನ್ ಆರೋಪಮುಕ್ತಗೊಂಡಿರುವ ಕಾರಣ ಬಿಗ್ ರಿಲೀಫ್ ಸಿಕ್ಕಂತಾಗಿದೆ.