Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಶಾಲಾ ವಾಹನಕ್ಕೆ ರೈಲು ಡಿಕ್ಕಿ; 7 ಮಕ್ಕಳ ಸಾವು

$
0
0
ಶಾಲಾ ವಾಹನಕ್ಕೆ ರೈಲು ಡಿಕ್ಕಿ; 7 ಮಕ್ಕಳ ಸಾವು

ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬದೌಹಿಯಲ್ಲಿ ನಡೆದಿದೆ.

ಖಾಸಗಿ ಶಾಲೆಗೆ ಸೇರಿದ ಈ ಬಸ್, ಮಾನವ ರಹಿತ ಕ್ರಾಸಿಂಗ್ ಬಳಿ ಹಳಿ ದಾಟುವ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಇದರ ಪರಿಣಾಮ ಬಸ್ ನಜ್ಜುಗುಜ್ಜಾಗಿದೆ.

ಬಸ್ ನಲ್ಲಿ 19 ಮಂದಿ ಮಕ್ಕಳಿದ್ದರೆಂದು ಹೇಳಲಾಗಿದ್ದು, 7 ಮಂದಿ ಸಾವನ್ನಪ್ಪಿದ್ದರೆ ಹಲವರು ಗಾಯಗೊಂಡಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>