ಚೆನ್ನೈ: ಬ್ಯಾಂಕ್ ನಲ್ಲಿ ನಿಮ್ಮ ಯಾವುದೇ ಕೆಲಸ ಕಾರ್ಯಗಳಿದ್ದರೆ, ಜುಲೈ 28ರಂದೇ ಮುಗಿಸಿಕೊಳ್ಳಿ. ಇಲ್ಲವಾದರೆ ನೀವು ತೊಂದರೆ ಅನುಭವಿಸಬೇಕಾದೀತು. ಜುಲೈ 29ರಂದು ಮುಷ್ಕರ ನಡೆಸಲು ಬ್ಯಾಂಕ್ ನೌಕರರ ಮಂಡಳಿ ತೀರ್ಮಾನಿಸಿದೆ.
ಸರ್ಕಾರದೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗದ ಹಿನ್ನಲೆಯಲ್ಲಿ ಬ್ಯಾಂಕ್ ಯೂನಿಯನ್ ಗಳ ಸಂಯುಕ್ತ ವೇದಿಕೆ ಮುಷ್ಕರಕ್ಕೆ ಕರೆ ನೀಡಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಬ್ಯಾಂಕ್ ನೌಕರರು, ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬ್ಯಾಂಕ್ ಯೂನಿಯನ್ ಗಳ ಸಂಯುಕ್ತ ವೇದಿಕೆ. ಮುಖ್ಯ ಕಾರ್ಮಿಕರ ಸಮ್ಮುಖದಲ್ಲಿ ಸಂಬಂಧಿಸಿದ ಮಂತ್ರಾಲಯದಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಸಭೆಯಲ್ಲಿ ಒಮ್ಮತ ಮೂಡದ ಕಾರಣ, ಮುಷ್ಕರ ನಡೆಸಲು ನೌಕರರ ಸಂಘಟನೆಗಳು ತೀರ್ಮಾನಿಸಿವೆ.
ಅಖಿಲ ಭಾರತ ಬ್ಯಾಂಕ್ ನೌಕರರ ಮಂಡಳಿ ಪ್ರಧಾನ ಕಾರ್ಯದರ್ಶಿ ಸಿ.ಹೆಚ್.ವೆಂಕಟಾಚಲಂ ಅವರು, ಈ ಕುರಿತು ಮಾಹಿತಿ ನೀಡಿದ್ದು, ಬ್ಯಾಂಕ್ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಜುಲೈ 29 ರಂದು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.