ಗುರ್ ಗಾಂವ್: ಇತ್ತೀಚೆಗೆ ಹೆಣ್ಣುಮಕ್ಕಳ ಮೇಲೆ ಸಂಬಂಧಿಕರಿಂದಲೇ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಹೆಚ್ಚಾಗಿದ್ದು, ಮನೆಯಲ್ಲೇ ಲೈಂಗಿಕ ದೌರ್ಜನ್ಯ ನಡೆದ ವರದಿಯಾಗಿವೆ. ಹಲವು ಪ್ರಕರಣಗಳಲ್ಲಿ ತಂದೆ, ಸಹೋದರರು ಕೂಡ ದೌರ್ಜನ್ಯ ನಡೆಸಿದ ಬಗ್ಗೆ ಕೇಳಿರುತ್ತೀರಿ
ಅಂತಹ ಒಂದು ಪ್ರಕರಣದ ವರದಿ ಇಲ್ಲಿದೆ ನೋಡಿ. ಗುರ್ ಗಾಂವ್ ನ ಭಂದೋಸಿಯಲ್ಲಿ ಬಾಡಿಗೆಗೆ ವಾಸವಾಗಿದ್ದ ಸೋನಿಪತ್ ನ ಡ್ರೈವರ್ ಕುಟುಂಬದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಬಾಲಕ 14 ವರ್ಷದ ಸಹೋದರಿಯ ಮೇಲೆ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಸಹೋದರಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆತ ಬೆದರಿಸಿ ಅತ್ಯಾಚಾರ ಎಸಗಿದ್ದು, ನಂತರದಲ್ಲಿ ಮನೆಯವರೆಲ್ಲಾ ಮಲಗಿದ್ದ ಸಂದರ್ಭದಲ್ಲಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ಗರ್ಭಿಣಿಯಾಗಿದ್ದು, ತಂದೆಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಈತ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಈ ಮೊದಲೇ ಒಮ್ಮೆ ಬಂಧಿತನಾಗಿದ್ದ ಎಂದು ಹೇಳಲಾಗಿದೆ.