ಹೈದರಾಬಾದ್: ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಮಾನಸಿಕವಾಗಿ ಬಳಲಿದ್ದ, ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು, ಮೂವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟಿದ್ದಾರೆ.
ಅವರಿಗಿಂತ ಮೊದಲೇ ಮಹಿಳೆಯ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ ನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಘಾಟ್ಕೆಸರ್ ಮಂಡಲ್ ನ ಅನುಖುಷ್ ಪುರ್ ದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಆದಿಲಾಬಾದ್ ಜಿಲ್ಲೆಯ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 58 ವರ್ಷದ ಸತ್ಯನಾರಾಯಣ ಶುಕ್ರವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡನ ಸಾವಿನಿಂದ ಮನನೊಂದ ಪತ್ನಿ ಮೀರಾ (51), ಮಕ್ಕಳಾದ ಸ್ವಾತಿ (33), ನೀಲಿಮಾ (28) ಹಾಗೂ ಶಿವರಾಮಕೃಷ್ಣ (22) ಅವರು ಶನಿವಾರ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.