ಮೈಸೂರು: ಬೆಲ್ಜಿಯಂನಲ್ಲಿ ಅನಾರೋಗ್ಯದಿಂದ ನಿಧನರಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ರಾಕೇಶ್ ಮೃತದೇಹವನ್ನು ನಾಳೆ ಮೈಸೂರಿಗೆ ತರಲಾಗುವುದು. ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಲ್ಜಿಯಂನಿಂದ ದುಬೈ ಮಾರ್ಗವಾಗಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮೃತದೇಹವನ್ನು ತರಲಾಗುವುದು. ಬಳಿಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ, ಅಲ್ಲಿಂದ ಮೈಸೂರಿನ ವಸ್ತು ಪ್ರದರ್ಶನ ಮೈದಾನಕ್ಕೆ ತೆಗೆದುಕೊಂಡು ಹೋಗಲಿದ್ದು, ಅಂತಿಮ ದರ್ಶನದ ನಂತರ ಕಾಟೂರು ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬದವರು ಕೂಡ ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹಾದೇವಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ್ದಾರೆ.