ಲಖ್ನೋ: ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದ್ದು, ಅದರಲ್ಲಿಯೂ ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳು ಒಬ್ಬಂಟಿಯಾಗಿ ತಿರುಗಾಡಲು ಹಿಂದೆ ಮುಂದೆ ನೋಡುವಂತಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿ ಮತ್ತು ಆಕೆಯ ತಾಯಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ಸಮೀಪ ನಡೆದಿದೆ. 14 ವರ್ಷದ ಬಾಲಕಿ ಮತ್ತು ಆಕೆಯ ತಾಯಿ ಮನೆಯಲ್ಲಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ 15 ಮಂದಿ ದುಷ್ಕರ್ಮಿಗಳು ಅವರನ್ನು ಬೆದರಿಸಿ, ಹಲ್ಲೆ ನಡೆಸಿದ್ದಲ್ಲದೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣ ಭಾರೀ ಸುದ್ದಿಯಾಗಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿತ್ತು.
ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಹಳ್ಳಿಯೊಂದರಲ್ಲಿ ಅಡಗಿದ್ದ 15 ಮಂದಿ ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ. ಈ ಕಾಮುಕರು, 14 ವರ್ಷದ ಬಾಲಕಿ ಮತ್ತು ಆಕೆಯ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.