ಹಾಸನ: ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು, ಮೈದುನನ ಸಾವಿಗೆ ಕಾರಣವಾಗಿದ್ದ ಮಹಿಳೆ ವಿರುದ್ಧ, ಹಾಸನದ ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕನ ತಂದೆ ದೂರು ನೀಡಿದ್ದಾರೆ.
ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು, ತಮ್ಮ ಪುತ್ರನಿಗೆ ಮೋಸ ಮಾಡಿದ್ದಾಳೆ. ನಿರಂತರವಾಗಿ ಫೋನ್ ಮಾಡಿ ಆತನ ಸಾವಿಗೆ ಕಾರಣವಾಗಿದ್ದಾಳೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ನಡುವೆ ಪ್ರಕರಣದ ಆರೋಪಿ ಎನ್ನಲಾಗಿರುವ ಮಹಿಳೆ, ತನಗೆ ಮೈದುನ, ಮಾವ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾಳೆ ಎಂದು ತಿಳಿದುಬಂದಿದೆ. ಮೈದುನ ಸಾಯಲಿ ಎಂದು ನಾನು ಹಾಗೆಲ್ಲಾ ಮಾಡಿಲ್ಲ. ಅವರಿಗೆ ನನ್ನ ಕಷ್ಟವನ್ನು ಅರ್ಥೈಸುವ ಉದ್ದೇಶದಿಂದ ಫೇಸ್ ಬುಕ್ ನಲ್ಲಿ ಖಾತೆ ತೆರೆದು, ಆತನೊಂದಿಗೆ ಸ್ನೇಹ ಬೆಳೆಸಿ ಫೋನ್ ನಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾಳೆನ್ನಲಾಗಿದೆ.