ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಬಾಲಿ’ ವಿಶ್ವದೆಲ್ಲೆಡೆ ಕಮಾಲ್ ಮಾಡಿದ್ದು, ಗೊತ್ತೇ ಇದೆ. ಇದೇ ಸಂದರ್ಭದಲ್ಲಿ ರಜನಿಕಾಂತ್ ಅವರ ಕುರಿತಾದ ಸುದ್ದಿಯೊಂದು ಹೊರ ಬಿದ್ದಿದೆ. ರಜನಿ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.
ರಜನಿಕಾಂತ್ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಅದರಲ್ಲಿ ತಪ್ಪು ಭಾವನೆ ಮೂಡಿಸುವ ಸಂದೇಶವೊಂದನ್ನು ಪ್ರಕಟಿಸಲಾಗಿದ್ದು, ಇದು ರಜನಿಕಾಂತ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುವಂತಿತ್ತು. ಇದು ಗಮನಕ್ಕೆ ಬಂದ ಕೂಡಲೇ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ, ಸ್ಪಷ್ಟನೆ ನೀಡಿದ್ದು, ಸರಿಪಡಿಸಲಾಗಿದೆ ಎಂದು ಹೇಳಿದ್ದಾರೆ. ರಜನಿ ಟ್ವಿಟರ್ ಖಾತೆ ಹ್ಯಾಕ್ ಮಾಡಿ ಹೊಡೆದು ಕೊಲ್ಲು ಎಂದು ಸಂದೇಶ ಪೋಸ್ಟ್ ಮಾಡಲಾಗಿದ್ದು, ಇದು ಗಮನಕ್ಕೆ ಬರುತ್ತಲೇ, ಐಶ್ವರ್ಯ ಹ್ಯಾಕ್ ಆಗಿದ್ದ ಖಾತೆಯನ್ನು ಸರಿಪಡಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಹ್ಯಾಕರ್ಸ್, ರಜನಿ ಖಾತೆ ಹ್ಯಾಕ್ ಮಾಡಿ, ಹೀಗೆ ಗೊಂದಲ ಸೃಷ್ಠಿಸಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಬಳಿಕ ಅದನ್ನು ಸರಿಪಡಿಸಲಾಗಿದೆ. ರಜನಿಕಾಂತ್ ಅವರ ಅಳಿಯ ಧನುಷ್ ಮತ್ತು ಪುತ್ರಿ ಐಶ್ವರ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೇಳಲಾಗಿದೆ.