ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದ್ದು, ಸತತ 2ನೇ ದಿನ ದಿನ ಜೆ.ಸಿ.ಬಿ.ಗಳ ಘರ್ಜನೆ ನಡೆದಿದೆ. ಬೆಂಗಳೂರಿನ ಮಹಾದೇವಪುರ ಮತ್ತು ಬೊಮ್ಮನಹಳ್ಳಿ ವಲಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಕಸವನಹಳ್ಳಿ ಕೆರೆಯಿಂದ ಬೃಹತ್ ಜೆ.ಸಿ.ಬಿ. ಗಳು ಹಾಗೂ ಕಟ್ಟರ್ ಗಳನ್ನು ಬಳಸಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಗೆ ಬೆಂಗಳೂರಿನ ಅನೇಕ ಪ್ರದೇಶಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಿದ್ದರಿಂದ ನೀರು ಹರಿಯಲು ಅವಕಾಶವೇ ಇಲ್ಲದಂತಾಗಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ಸೂಚನೆಯಂತೆ ಬಿ.ಬಿ.ಎಂ.ಪಿ. ತೆರವು ಕಾರ್ಯಾಚರಣೆ ಆರಂಭಿಸಿದೆ.
ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಹದೇವಪುರ ವ್ಯಾಪ್ತಿಯ ಕೈಕೊಂಡನಹಳ್ಳಿಯಿಂದ ಚೋಳನಕೆರೆವರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.