ಮಂಡ್ಯ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಸಮೀಪ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.
ಕಾರ್ ಚಾಲಕ 20 ವರ್ಷದ ರಾಮಕೃಷ್ಣ ಹಾಗೂ ಬೈಕ್ ಸವಾರ 45 ವರ್ಷದ ಲತೀಫ್ ಎಂಬುವವರು ಮೃತಪಟ್ಟವರು. ತಡರಾತ್ರಿ ಅತಿವೇಗವಾಗಿ ಬಂದ ಕಾರ್ ಹಾಗೂ ಬೈಕ್ ಗಳು ನಿಯಂತ್ರಣಕ್ಕೆ ಸಿಗದೇ ಡಿಕ್ಕಿಯಾಗಿದ್ದು, ಈ ಸಂದರ್ಭದಲ್ಲಿ ರಾಮಕೃಷ್ಣ ಹಾಗೂ ಲತೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಪಾಷಾ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಮದ್ದೂರು ಠಾಣೆ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ