Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಹಿರಿಯ ಚಿತ್ರ ನಟಿ ಜ್ಯೋತಿ ಲಕ್ಷ್ಮಿ ಇನ್ನಿಲ್ಲ

$
0
0
ಹಿರಿಯ ಚಿತ್ರ ನಟಿ ಜ್ಯೋತಿ ಲಕ್ಷ್ಮಿ ಇನ್ನಿಲ್ಲ

ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟಿ ಜ್ಯೋತಿ ಲಕ್ಷ್ಮಿ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದ ಜ್ಯೋತಿ ಲಕ್ಷ್ಮಿ, 1970 ರಲ್ಲಿ ತಮಿಳು ಚಿತ್ರವೊಂದರಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್ ನ ಕೆಲ ಚಿತ್ರಗಳಲ್ಲೂ ಜ್ಯೋತಿ ಲಕ್ಷ್ಮಿ ಕಾಣಿಸಿಕೊಂಡಿದ್ದರು.

ನಾಯಕಿ ಪಾತ್ರಕ್ಕೆ ಬೇಡಿಕೆ ಕಡಿಮೆಯಾಗುತ್ತಿದ್ದಂತೆಯೇ ಸ್ಪೆಷಲ್ ಸಾಂಗ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜ್ಯೋತಿ ಲಕ್ಷ್ಮಿ ಈ ಕಾರಣಕ್ಕಾಗಿ ಸಾಕಷ್ಟು ಜನಪ್ರಿಯರಾಗಿದ್ದರು. ಸಹೋದರಿ ಜಯಮಾಲಿನಿ ಚಿತ್ರರಂಗ ಪ್ರವೇಶಿಸುತ್ತಿದ್ದಂತೆಯೇ ಜ್ಯೋತಿ ಲಕ್ಷ್ಮಿಯವರು ಕ್ರಮೇಣ ನೇಪಥ್ಯಕ್ಕೆ ಸರಿದಿದ್ದರು.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>