10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಕೆಯ ಶಾಲಾ ಗಳೆಯನೇ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
ದಕ್ಷಿಣ ದೆಹಲಿಯ ವಸಂತ್ ಕುಂಜ್ ಏರಿಯಾದಲ್ಲಿ ಸೋಮವಾರದಂದು ಈ ಘಟನೆ ನಡೆದಿದ್ದು, ಶಾಲಾ ಅವಧಿಯಲ್ಲಿಯೇ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿದ್ದ ಅಪ್ರಾಪ್ತ ಬಾಲಕ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ವಿದ್ಯಾರ್ಥಿನಿಯ ಪೋಷಕರು ಈ ಕುರಿತು ಸೋಮವಾರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತನನ್ನು ಬಂಧಿಸಿರುವ ಪೊಲೀಸರು ಆತನನ್ನು ರಿಮ್ಯಾಂಡ್ ಹೋಂ ಗೆ ಕಳುಹಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ವೇಳೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎನ್ನಲಾಗಿದೆ.