ಬೆಂಗಳೂರು: ಮದುವೆಯಾಗಿ 7 ವರ್ಷ ಕಳೆದರೂ, ಮಕ್ಕಳಾಗಿಲ್ಲ ಎಂದು ವ್ಯಕ್ತಿಯೊಬ್ಬ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ವಕೀಲರಾಗಿರುವ ವ್ಯಕ್ತಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಆಂಧ್ರಪ್ರದೇಶದ ಕುಪ್ಪಂ ಮೂಲದ ಯುವತಿಯನ್ನು ಬೆಂಗಳೂರಿನ ವಕೀಲನೊಂದಿಗೆ ಮದುವೆ ಮಾಡಲಾಗಿತ್ತು. ಮದುವೆಯಾಗಿ 7 ವರ್ಷ ಆಗಿದ್ದು, ಈ ಅವಧಿಯಲ್ಲಿ ಪತ್ನಿಗೆ ವ್ಯಕ್ತಿ ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಮಕ್ಕಳಾಗದ ಕಾರಣಕ್ಕೆ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಅಲ್ಲದೇ, ಗಂಡನ ಮನೆಯವರು ಕೂಡ ತಮ್ಮ ಮಗಳಿಗೆ ಕಿರುಕುಳ ನೀಡಿದ್ದಾರೆ. ಇದನ್ನು ಮಗಳು ಹೇಳಿಕೊಂಡಿದ್ದಳೆಂದು ಪೋಷಕರು ತಿಳಿಸಿದ್ದಾರೆ.
ಸೀಮೆ ಎಣ್ಣೆ ಸುರಿದು ಮಹಿಳೆಗೆ ಬೆಂಕಿ ಹಚ್ಚಲಾಗಿದ್ದು, ಸ್ಟವ್ ಸಿಡಿದು ಗಾಯಗೊಂಡಿದ್ದಾಳೆ ಎಂದು ತವರು ಮನೆಯವರಿಗೆ ಫೋನ್ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಆಂಧ್ರದಿಂದ ಬಂದ ಮಹಿಳೆಯ ಪೋಷಕರು, ಗಂಡನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.