ಕೇಂದ್ರ ಸರ್ಕಾರ, ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಇಂಗಿತ ವ್ಯಕ್ತಪಡಿಸಿದೆ.
ಬೈಕ್ ಸವಾರರು ತಮ್ಮ ಸುರಕ್ಷತೆಗಾಗಿ ಈ ನಿಯಮವನ್ನು ಅನುಸರಿಸಬೇಕು ಎಂದು ಸರ್ಕಾರ ಹೇಳಿದೆ. ಮಂಗಳವಾರದಂದು ಲೋಕಸಭೆಯಲ್ಲಿ ಮಂಡಿಸಲಾದ ಹೊಸ ವಿಧೇಯಕದಲ್ಲಿ ಪೇಟಾ ಧರಿಸುವ ಸಿಖ್ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.
ಹೆಲ್ಮೆಟ್ ಹೊರತಾಗಿ ಕಾರಿನಲ್ಲಿ ಪ್ರಯಾಣಿಸುವ 14 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ 1000 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿದುಬಂದಿದೆ.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಪ್ರತಿದಿನ ಸುಮಾರು 400 ಜನರು ರಸ್ತೆ ಅಪಘಾತದಲ್ಲಿ ಮೃತರಾಗುತ್ತಿದ್ದಾರೆ. ಈ ಹೊಸ ಕಾನೂನು ಇಂಥಹ ಅಪಘಾತಗಳನ್ನು ತಡೆಯುವಲ್ಲಿ ಸಹಕಾರಿಯಾಗುತ್ತದೆ ಎಂದಿದ್ದಾರೆ.