ಮೈಸೂರಿನಲ್ಲಿ ನಿನ್ನೆಯಷ್ಟೇ ಟ್ಯೂಷನ್ ಗೆ ತೆರಳಿದ್ದ 4 ವರ್ಷದ ಬಾಲಕಿ ಮೇಲೆ ಶಿಕ್ಷಕಿಯ ಪುತ್ರ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು ವರದಿಯಾಗಿತ್ತು. ದಾವಣಗೆರೆ ಜಿಲ್ಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಬಳಿ 4 ವರ್ಷದ ಬಾಲಕಿ ಮೇಲೆ, 70 ವರ್ಷದ ವೃದ್ಧನೊಬ್ಬ ಅತ್ಯಾಚಾರ ಎಸಗಿದ್ದಾನೆ. ನಲ್ಲೂರು ಸಮೀಪದ ಬಿಲಾಲ್ ನಗರದ ಹಣ್ಣಿನ ವ್ಯಾಪಾರಿಯಾಗಿರುವ ವೃದ್ಧ, ಬಾಲಕಿಗೆ ಹಣ್ಣು ಕೊಡುವುದಾಗಿ ಹೇಳಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಮನೆಗೆ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಚನ್ನಗಿರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.