ಕಾಲೇಜು ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ತುಂಗಾ ನದಿಗೆ ಹಾರಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಇಲಿಯಾಸ್ ನಗರದ ಅಹಮದ್ ಖಲೀಲ್ ಎಂಬವರ ಪುತ್ರ ಮಹಮ್ಮದ್ ರಿಜ್ವಾನ್, ಸಹೋದರನ ಮೆಡಿಕಲ್ ಸ್ಟೋರ್ ಗೆ ತೆರಳಿ ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ದ್ವಿಚಕ್ರ ವಾಹನದಲ್ಲಿ ಹೊರಟು ಹೊಳೆ ಬಸ್ ನಿಲ್ದಾಣದ ಸೇತುವೆ ಮೇಲೆ ವಾಹನ ನಿಲ್ಲಿಸಿದ್ದಾರೆ. ನಂತರ ತುಂಗಾ ನದಿಗೆ ಹಾರಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನೂ ಪತ್ತೆಯಾಗದ ಹಿನ್ನಲೆಯಲ್ಲಿ ಆತನ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.