ನವದೆಹಲಿ: ಪಾಕಿಸ್ತಾನದ 70ನೇ ಸ್ವಾತಂತ್ರ್ಯ ದಿನಾಚರಣೆ ಭಾನುವಾರ ನಡೆದಿದ್ದು, ನವದೆಹಲಿಯ ಪಾಕಿಸ್ತಾನ ಹೈಕಮಿಷನರ್ ಕಚೇರಿಯಲ್ಲಿಯೂ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ರಾಯಭಾರಿ ಅಬ್ದುಲ್ ಬಸಿತ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಪಾಕ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಬ್ದುಲ್ ಬಸಿತ್ ಮಾತನಾಡಿ, ಪಾಕಿಸ್ತಾನದ 70ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಸಮರ್ಪಿಸುತ್ತೇವೆ ಎಂದು ಹೇಳಿದ್ದಾರೆ. ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ತಡೆ ನೀಡಿ, ಅಲ್ಲಿನ ಜನರಿಗೆ ಸ್ವಾತಂತ್ರ್ಯ ದೊರಕಿಸಿಕೊಡಬೇಕಿದೆ. ಜಮ್ಮು ಮತ್ತು ಕಾಶ್ಮೀರದ ಜನತೆ ಮಾಡಿರುವ ತ್ಯಾಗ ಮತ್ತು ಬಲಿದಾನಗಳು ಫಲ ಕೊಡುತ್ತವೆ. ಇದಕ್ಕಾಗಿ ಪಾಕ್ ಬೆನ್ನೆಲುಬಾಗಿರುತ್ತದೆ ಎಂದು ಹೇಳಿದ್ದಾರೆ.
ಭಾರತದೊಂದಿಗೆ ಎಂದಿಗೂ ಉತ್ತಮ ಬಾಂಧವ್ಯವನ್ನು ಪಾಕಿಸ್ತಾನ ಬಯಸುತ್ತದೆ. ಕಾಶ್ಮೀರ ಸ್ವಾತಂತ್ರ್ಯವಾಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಅಬ್ದುಲ್ ಬಸಿತ್ ಹೇಳಿದ್ದಾರೆ. ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.