ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲಿ ಒಬ್ಬರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು, ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದು, ‘ದುನಿಯಾ’ ಸೂರಿ ನಿರ್ದೇಶನದಲ್ಲಿ ‘ಟಗರು’ ಚಿತ್ರದಲ್ಲಿ ನಟಿಸಲಿದ್ದಾರೆ.
ಈಗಾಗಲೇ ಶಿವರಾಜ್ ಕುಮಾರ್ ಹಾಗೂ ಸೂರಿ ‘ಕಡ್ಡಿಪುಡಿ’ ಚಿತ್ರದಲ್ಲಿ ಕಮಾಲ್ ಮಾಡಿದ್ದು, ‘ಟಗರು’ ಕೂಡ ಭಾರೀ ನಿರೀಕ್ಷೆ ಮೂಡಿಸಿದೆ. ಶಿವರಾಜ್ ಕುಮಾರ್, ಮಾನ್ವಿತಾ, ಧನಂಜಯ್, ವಶಿಷ್ಠ ಮೊದಲಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕ ನಟನಾಗಿ ಗಮನ ಸೆಳೆದಿರುವ ಧನಂಜಯ್ ಈ ಚಿತ್ರದಲ್ಲಿ ವಿಲನ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸ್ಥಳಗಳಲ್ಲಿ ಚಿತ್ರದ ಫೋಟೋ ಶೂಟ್ ಮಾಡಲಾಗಿದ್ದು, ಗಮನ ಸೆಳೆದಿವೆ.
ಕೆ.ಪಿ.ಶ್ರೀಕಾಂತ್ ಚಿತ್ರ ನಿರ್ಮಾಣ ಮಾಡಲಿದ್ದು, ಆಗಸ್ಟ್ 21 ರಂದು ಅದ್ಧೂರಿಯಾಗಿ ಮುಹೂರ್ತ ನೆರವೇರಲಿದೆ. ಚರಣ್ ರಾಜ್ ಸಂಗೀತ ನೀಡಿದ್ದು, ಸೂರಿ ಕತೆ, ಚಿತ್ರಕತೆ ಜೊತೆಗೆ ಸಂಭಾಷಣೆ, ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ ಎಂದು ಹೇಳಲಾಗಿದೆ.