ಕಳೆದ ಕೆಲವು ತಿಂಗಳಿಂದ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಆಡಳಿತದ ಉತ್ತರಾಖಂಡ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಬಂಡಾಯ ಎದ್ದಿದ್ದರು.
ಹೀಗೆ ಬಂಡಾಯ ಎದ್ದಿದ್ದ 9 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಉತ್ತರಾಖಂಡ್ ರಾಜ್ಯದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ನ 9 ಶಾಸಕರು ಬಂಡಾಯ ಎದ್ದಿದ್ದರಿಂದ ಹಲವು ನಾಟಕೀಯ ಬೆಳವಣಿಗೆಗಳು ನಡೆದಿದ್ದವು. ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿತ್ತು. ನಂತರ ನ್ಯಾಯಾಲಯ ಅದಕ್ಕೆ ತಡೆ ನೀಡಿತ್ತು. ಹಲವು ಬೆಳವಣಿಗೆ ನಂತರ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಲ್ಲಿ ವಿಶ್ವಾಸಮತ ಯಾಚನೆ ನಡೆಸಲಾಗಿತ್ತು.
ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಕಂಡ ಹರೀಶ್ ರಾವತ್ ಮತ್ತೆ ಸಿಎಂ ಆಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಳ್ಳಲು ಕಾರಣರಾಗಿದ್ದ 9 ಬಂಡಾಯ ಶಾಸಕರು ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಗೆ ಸೇರಿದ್ದಾರೆ.