ಬೆಂಗಳೂರು: ಹುಟ್ಟುಹಬ್ಬದ ಪಾರ್ಟಿಗೆ ಬಂದಿದ್ದ ಗೆಳತಿ ಮೇಲೆಯೇ, ಮೂವರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೊರರಾಜ್ಯದ 25 ವರ್ಷದ ಯುವತಿ ಅತ್ಯಾಚಾರಕ್ಕೆ ಒಳಗಾದವಳು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಅಸ್ಸಾಂ ಮೂಲದ ಮೆಹಬೂಬ್, ಖಾಲೀದ್, ಬುಕ್ತಿಯಾರ್ ಎಂಬ ಯುವಕರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಯುವತಿ 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಬ್ಯೂಟಿಷಿಯನ್ ಕೆಲಸ ಮಾಡಿಕೊಂಡಿದ್ದಳು. ಆರೋಪಿಗಳ ಪರಿಚಯವಾಗಿದ್ದು, ಗೆಳೆತನವಿತ್ತು. ಆರೋಪಿಗಳು ಲೇಔಟ್ ನಲ್ಲಿ ವಾಸವಾಗಿದ್ದು, ಫಿಜ್ಜಾ ಕಾರ್ನರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಹುಟ್ಟುಹಬ್ಬದ ಪಾರ್ಟಿಗೆಂದು ಬಂದಿದ್ದ ಸಂದರ್ಭದಲ್ಲಿ ಆರೋಪಿಗಳು, ಕುಡಿದ ಮತ್ತಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದು, ನಂತರ ಪೊಲೀಸರಿಗೆ ಮಾಹಿತಿ ಗೊತ್ತಾಗಿದೆ.
ಮೇ 15ರಂದು ಘಟನೆ ನಡೆದಿದ್ದು, ಬುಧವಾರ ಆನೇಕಲ್ ಸಮೀಪದ ಚಂದಾಪುರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ ಎಂದು ಹೇಳಲಾಗಿದೆ.