ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದಲ್ಲಿ ರಾಷ್ಟ್ರ ವಿರೋಧಿ ಪ್ರಕರಣ ಹೆಚ್ಚಾಗುತ್ತಿವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೆಲವರು ದೇಶಪ್ರೇಮವನ್ನು ಪ್ರಶ್ನಿಸುತ್ತಿದ್ದಾರೆ. ರಾಷ್ಟ್ರವಾದ ದೇಶವನ್ನು ಒಗ್ಗೂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶದ ವಿರುದ್ಧ ಮಾತನಾಡಬಾರದು ಎಂದು ಅಮಿತ್ ಶಾ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರು, ವೀರರಾಣಿ ಅಬ್ಬಕ್ಕ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಇದ್ದರು.
ಅಮಿತ್ ಶಾ ಅವರು, ಮಂಗಳೂರಿನಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿ, ಬೈಕ್ ನಲ್ಲೇ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ನಕಲಿ ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.