ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಪ್ರಸಕ್ತ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಟೂರ್ನಿಯಲ್ಲಿ ಕೊಹ್ಲಿ ಬರೋಬ್ಬರಿ 3 ಶತಕ ಬಾರಿಸಿದ್ದಾರೆ.
ಕೊಹ್ಲಿ ಬ್ಯಾಟಿಂಗ್ ಅಬ್ಬರದ ಮೂಲಕ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರನ್ನು ಕ್ರಿಕೆಟ್ ದೇವರೆಂದೇ ಖ್ಯಾತರಾದ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಹೋಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ನನ್ನನ್ನು ಯಾವುದೇ ಕಾರಣಕ್ಕೂ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಹೋಲಿಕೆ ಮಾಡಬೇಡಿ. ಇದರಿಂದ ನನಗೆ ಪೇಚಿಗೆ ಸಿಲುಕಿದಂತಾಗುತ್ತದೆ ಎಂದು ಹೇಳಿದ್ದಾರೆ.
ನಮ್ಮಿಬ್ಬರ ನಡುವೆ ಹೋಲಿಕೆ ಮಾಡುವುದು ಸರಿಯಾಗಿಲ್ಲ. ಸಚಿನ್ ಅವರು ಅದ್ಭುತ ಸಾಮರ್ಥ್ಯ ಹೊಂದಿದ್ದರು. ದೇಶಕ್ಕಾಗಿ 24 ವರ್ಷ ಆಟವಾಡಿದ್ದಾರೆ. ನಾನು ಇತ್ತೀಚೆಗಷ್ಟೆ ಉತ್ತಮ ಆಟವಾಡುತ್ತಿದ್ದೇನೆ. ಇದನ್ನು ಉತ್ತಮ ಫಾರ್ಮ್ ಎಂದು ಹೇಳಲಾರೆ ಎಂದಿರುವ ಕೊಹ್ಲಿ, ಸಚಿನ್ ಅವರೊಂದಿಗೆ ಹೋಲಿಕೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.