ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರದಲ್ಲಿ ದರ್ಶನ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
80 ರ ದಶಕದ ಕತೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ನಟಿಸಲಿದ್ದಾರೆ. ಈಗಾಗಲೇ ದರ್ಶನ್ ಮತ್ತು ಆದಿತ್ಯ ಯಶಸ್ವಿ ಚಿತ್ರ ‘ಸ್ನೇಹಾನಾ ಪ್ರೀತಿನಾ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಅದಾಗಿ ಬಹು ವರ್ಷಗಳ ನಂತರ, ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ. ‘ಚಕ್ರವರ್ತಿ’ಯಲ್ಲಿ ಆದಿತ್ಯ ಪೊಲೀಸ್ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಚಿಂತನ್ ಈ ಬಹು ನಿರೀಕ್ಷೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಅಣಜಿ ನಾಗರಾಜ್ ಮತ್ತು ಸಿದ್ಧಾಂತ್ ನಿರ್ಮಾಣ ಮಾಡಿರುವ ‘ಚಕ್ರವರ್ತಿ’ ಭಾರೀ ನಿರೀಕ್ಷೆ ಮೂಡಿಸಿದ್ದು, ದರ್ಶನ್ ಅವರೊಂದಿಗೆ ಆದಿತ್ಯ, ಸೃಜನ್ ಲೋಕೇಶ್ ಮೊದಲಾದವರು ಅಭಿನಯಿಸಿದ್ದಾರೆ ಎಂದು ಹೇಳಲಾಗಿದೆ.