Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಆಧಾರ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಸಿಹಿ ಸುದ್ದಿ

$
0
0
ಆಧಾರ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಸಿಹಿ ಸುದ್ದಿ

ಮಂಗಳೂರು: ಪಡಿತರ ಚೀಟಿ ಪಡೆಯಲು ಕಾಯುತ್ತಿರುವ ನಾಗರಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಸೆಪ್ಟಂಬರ್ 1 ರಿಂದಲೇ ಪಡಿತರ ಚೀಟಿಗೆ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎನ್ನಲಾಗಿದೆ.

ಸೆಪ್ಟಂಬರ್ 1 ರಿಂದ ಆನ್ ಲೈನ್ ನಲ್ಲಿ ಪಡಿತರ ಚೀಟಿಗೆ ಅರ್ಜಿ ಸ್ವೀಕರಿಸಲಾಗುವುದು, ಇನ್ನುಮುಂದೆ ಪಡಿತರ ಚೀಟಿ ಪಡೆಯಲು ಆಧಾರ್ ಕಾರ್ಡ್ ಸಾಕು. ಬೇರೆ ದಾಖಲೆಗಳು ಬೇಕಿಲ್ಲ ಎನ್ನಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಯು.ಟಿ. ಖಾದರ್ ಅವರು, ಈ ಕುರಿತು ಮಾಹಿತಿ ನೀಡಿದ್ದು, ಪಡಿತರ ಚೀಟಿ ಪಡೆಯಲು ಇದ್ದ ಎಲ್ಲಾ ಗೊಂದಲ ನಿವಾರಿಸಿದ್ದು, ಸೆಪ್ಟಂಬರ್ 1 ರಿಂದಲೇ ಆನ್ ಲೈನ್ ನಲ್ಲಿ ಅರ್ಜಿ ಸ್ವೀಕರಿಸಲಾಗುವುದೆಂದು ತಿಳಿಸಿದ್ದಾರೆ.

ಪಡಿತರ ಪಡೆದುಕೊಳ್ಳಲು ಈಗಾಗಲೇ ಪ್ರಾಯೋಗಿಕವಾಗಿ ಕೂಪನ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಪಡಿತರ ಚೀಟಿ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು, ಆನ್ ಲೈನ್ ಮೂಲಕ ಸೆಪ್ಟಂಬರ್ 1 ರಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಿದ್ದಾರೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>