ಮಧ್ಯಪ್ರದೇಶದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಭಾರೀ ವರ್ಷಧಾರೆಗೆ ಮಧ್ಯ ಪ್ರದೇಶದ ಹಲವು ಭಾಗಗಳು ತತ್ತರಿಸಿ ಹೋಗಿವೆ. ರಾಜ್ಯದಲ್ಲಿ ಮಳೆಗೆ ಸಂಬಂಧಿಸಿದ ಅವಘಡಗಳಲ್ಲಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇನ್ನು 36 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಪ್ರವಾಹ ಪೀಡಿತ ರೆವಾದಲ್ಲಿ ಸಂತ್ರಸ್ಥರ ನೆರವಿಗಾಗಿ ಸೇನೆಯನ್ನು ಕರೆಸಿಕೊಳ್ಳಲಾಗಿದೆ. ಶಿವ್ನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸತ್ನಾಗರ ಜಿಲ್ಲೆಯಲ್ಲೂ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆಲ್ಲ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಉಜ್ಜಯಿನಿ ಜಿಲ್ಲೆಯಲ್ಲಿ ಚಂಬಲ್ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಲ್ಲಿ ಪ್ರವಾಹದ ಆತಂಕ ಸೃಷ್ಟಿಯಾಗಿದೆ.