ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ ತಿಕ್ಕಾಟಕ್ಕೆ ಕಾರಣವಾಗಿದೆ.
ಪಕ್ಷದ ಹಿರಿಯ ನಾಯಕರ ನಡುವೆ ಭಿನ್ನಮತಕ್ಕೆ ಕಾರಣವಾಗಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆಗೆ ಸಂಬಂಧಿಸಿದಂತೆ ಬಿ.ಜೆ.ಪಿ. ಹಿರಿಯ ನಾಯಕರು ಹಾಗೂ ಆರ್.ಎಸ್.ಎಸ್. ಮುಖಂಡರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈಶ್ವರಪ್ಪ ಅವರು, ಬೆಂಗಳೂರು ಚಾಮರಾಜಪೇಟೆಯಲ್ಲಿರುವ ರಾಷ್ಟ್ರೋತ್ಥಾನ ಕಚೇರಿಗೆ ಭೇಟಿ ನೀಡಿ, ಆರ್.ಎಸ್.ಎಸ್. ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ನವದೆಹಲಿಯಲ್ಲಿ ಬಿ.ಜೆ.ಪಿ. ಕೋರ್ ಕಮಿಟಿ ಸದಸ್ಯರ ಸಭೆ ನಡೆಯಲಿದ್ದು, ಅಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಚರ್ಚೆಯಾಗಲಿದೆ ಎನ್ನಲಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಈಶ್ವರಪ್ಪನವರು ಆರ್.ಎಸ್.ಎಸ್. ಮುಖಂಡರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.