ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಕಲಾವಿದರಿಂದಲೇ ಪ್ರೋತ್ಸಾಹ, ಬೆಂಬಲ ಸಿಗುತ್ತಿಲ್ಲ ಎಂದು ಹಿರಿಯ ನಟಿ ತಾರಾ ದೂರಿದ್ದಾರೆ. ‘ಮಡಮಕ್ಕಿ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನ್ನಡ ಚಿತ್ರಗಳಿಗೆ ನಿರೀಕ್ಷಿತ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ವಾರಕ್ಕೆ 4-5 ಸಿನಿಮಾಗಳು ರಿಲೀಸ್ ಆಗುತ್ತಿವೆ. ಇದರಿಂದಾಗಿ ಥಿಯೇಟರ್ ಸಿಗದೇ ಸಮಸ್ಯೆಯಾಗಿದ್ದು, ಇದನ್ನು ಬಗೆಹರಿಸಲು ಫಿಲಂ ಚೇಂಬರ್ ಕ್ರಮ ಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ‘ಗೋಲಿಸೋಡಾ’ ಚಿತ್ರದ ಸೆಲೆಬ್ರಿಟಿ ಶೋ ಏರ್ಪಡಿಸಲಾಗಿದ್ದು, ಚಿತ್ರದ ಬಹಳಷ್ಟು ಕಲಾವಿದರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಸ್ಟಾರ್ ಗಳಿರಲಿ, ಆಹ್ವಾನಿತ ಕಲಾವಿದರು ಕೂಡ ಆಗಮಿಸಲಿಲ್ಲ ಎಂದು ತಾರಾ ದೂರಿದ್ದಾರೆ ಎನ್ನಲಾಗಿದೆ.
ಕನ್ನಡ ಚಿತ್ರಗಳಿಗೆ ಕಲಾವಿದರೇ ಪ್ರೋತ್ಸಾಹ ನೀಡುತ್ತಿಲ್ಲ. ನಮ್ಮ ಕಲಾವಿದರಿಂದಲೇ ಬೆಂಬಲ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದ್ದಾರೆ. ಹಿರಿಯ ನಟಿ ತಾರಾ ಅವರು, ನೀಡಿದ ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.