ಬೆಂಗಳೂರು: ವಿಚಾರಣಾಧೀನ ಕೈದಿಯೊಬ್ಬ ಸಿನಿಮೀಯ ರೀತಿಯಲ್ಲಿ ಜೈಲಿನಿಂದ ಎಸ್ಕೇಪ್ ಆದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಬೆಳಗಿನ ಜಾವ ತರಕಾರಿ ವಾಹನದಲ್ಲಿ ಕೈದಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 30 ವರ್ಷದ ಡೇವಿಡ್ ಪರಾರಿಯಾದ ಕೈದಿ. ಡೇವಿಡ್ ಬೆಳಗಿನ ಜಾವ ಜೈಲಿನೊಳಗೆ ಬಂದಿದ್ದ ತರಕಾರಿ ವಾಹನದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಜೈಲಿಗೆ ತರಕಾರಿ ಕೊಡಲು ಬಂದ ವಾಹನ, ಅಲ್ಲಿಂದ ತೆರಳುವ ಸಂದರ್ಭದಲ್ಲಿ ಡೇವಿಡ್ ಅದರಲ್ಲಿ ಅವಿತು ಕುಳಿತಿದ್ದಾನೆ. ಪ್ರವೇಶ ದ್ವಾರದ ಬಳಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಆತ ಕಂಡಿರಲಿಲ್ಲ. ಆದರೆ ಜೈಲಿನ ಕೈದಿಗಳ ಮಾಹಿತಿ ಪಡೆಯುವಾಗ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಡೇವಿಡ್ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಆತ ಬೆಳಗಿನ ಜಾವ ತರಕಾರಿ ವಾಹನದಲ್ಲಿ ಎಸ್ಕೇಪ್ ಆಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.