ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕೈಗೊಂಡಿರುವ ಮುಷ್ಕರಕ್ಕೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪೂರಕ ಪ್ರತಿಕ್ರಿಯೆ ಕಂಡು ಬಂದಿದೆ.
ಕೆ.ಎಸ್.ಆರ್.ಟಿ.ಸಿ. ಹಾಗೂ ಬಿ.ಎಂ.ಟಿ.ಸಿ. ಬಸ್ ಸಂಚಾರ ಕೆಲವು ಕಡೆಗಳಲ್ಲಿ ಬಂದ್ ಆಗಿರುವುದರಿಂದ ಬೆಂಗಳೂರಿನಲ್ಲಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸರ್ಕಾರಿ ಸಾರಿಗೆ ಇಲ್ಲದ ಕಾರಣ, ಜನ ಖಾಸಗಿ ವಾಹನಗಳನ್ನೇ ಹೆಚ್ಚಾಗಿ ಅವಲಂಬಿಸಬೇಕಾಯಿತು. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನಗಳು, ಕೆಲವು ಕಡೆಗಳಲ್ಲಿ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿರುವುದಾಗಿ ವರದಿಯಾಗಿದೆ.
ಬಹುತೇಕ ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಬೀರಿಲ್ಲ. ಖಾಸಗಿ ವಾಹನ, ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವೂ ಯಥಾಸ್ಥಿತಿಯಲ್ಲಿತ್ತು. ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.