ಕಲಬುರಗಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಸಾರಿಗೆ ಬಸ್ ಸಂಚಾರ ಕೆಲವೆಡೆ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದ ಮೇರೆಗೆ, ವಿವಿಧ ಕಡೆಗಳಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಕಲಬುರಗಿಯ ಮಾರ್ಕೆಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಬೆಂಕಿ ತಗುಲಿದೆ. ಬಸವರಾಜ್ ಎಂಬಾತ ಪ್ರತಿಭಟನೆ ಸಂದರ್ಭದಲ್ಲಿ ಟೈಯರ್ ಗೆ ಬೆಂಕಿ ಹಚ್ಚಲು ಮುಂದಾಗಿದ್ದು, ಬೆಂಕಿ ಅವರ ತಲೆ ಹಾಗೂ ಭುಜಕ್ಕೆ ತಗುಲಿದೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಕಲಬುರಗಿಯ ಮಾರ್ಕೆಟ್ ಬಳಿ ಒಂದುಗೂಡಿದ ಪ್ರತಿಭಟನಾಕಾರರು, ಟೈಯರ್ ಗೆ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಹಾಕಿದ್ದರಿಂದ ಬಸವರಾಜ್ ಅವರ ತಲೆ ಹಾಗೂ ಭುಜಕ್ಕೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ.