ಮಂಡ್ಯ: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದ ಆಡಿಯೋ ಜನಸಾಗರದ ನಡುವೆ ಬಿಡುಗಡೆಯಾಯಿತು.
ಮಂಡ್ಯದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದ ಅಭಿಮಾನಿಗಳು, ಜನರ ನಡುವೆ ‘ಜಾಗ್ವಾರ್’ ಆಡಿಯೋ ಬಿಡುಗಡೆ ಮಾಡಲಾಯಿತು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಚಿತ್ರದ ನಿರ್ದೇಶಕ ಮಹದೇವ್, ಕತೆಗಾರ ವಿಜಯೇಂದ್ರ ಪ್ರಸಾದ್, ನಟ ನಿಖಿಲ್ ಕುಮಾರ್, ಜಗಪತಿ ಬಾಬು, ಸಂಪತ್ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಎಸ್.ಎಸ್. ಥಮನ್ ಸಂಗೀತ ನೀಡಿರುವ ಹಾಡುಗಳು ಮೋಡಿ ಮಾಡುವಂತಿವೆ. ಲಹರಿ ಸಂಸ್ಥೆಯ ವೇಲು, ಇಂತಹ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿರುವ ಜಾಗ್ವಾರ್’ ಆಡಿಯೋ ಮಾರಾಟದಲ್ಲಿ ದಾಖಲೆ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.