ನವದೆಹಲಿ: ದೇಶದ ಗಮನ ಸೆಳೆದಿದ್ದ, ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಸೋಲಿನ ಬಗ್ಗೆ ಮಾತನಾಡಿದ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಯಾವುದೇ ಸೋಲು ಶಾಶ್ವತವಲ್ಲ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ, 25ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿ. ಯಾವುದೇ ಸೋಲು ಶಾಶ್ವತವಲ್ಲ, ಸೋಲಿನ ನಂತರ ಗೆಲುವು ನಮ್ಮದಾಗಲಿದೆ ಎಂದು ಹೇಳಿದ್ದಾರೆ. ಸೋಲೇ ಶಾಶ್ವತವಲ್ಲ, ಬದ್ಧತೆಯಿಂದ ಕೆಲಸ ಮಾಡಿದರೆ, ನಾವು ಗೆಲುವನ್ನು ಪಡೆಯಬಹುದೆಂದು ತಿಳಿಸಿದ್ದಾರೆ.
ರಾಜೀವ್ ಗಾಂಧಿ ಅವರ ತ್ಯಾಗ, ಬಲಿದಾನವನ್ನು ನಾವೆಲ್ಲಾ ಸ್ಮರಿಸಬೇಕು. ಅವರ ಮೌಲ್ಯ, ಆಧುನಿಕತೆಯ ಗುಣಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಸಂಘಟಿಸಬೇಕೆಂದು ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.