ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ.
ಬೆಂಗಳೂರಿನ ಮೈಸೂರು ರಸ್ತೆಯ ರಾಜರಾಜೇಶ್ವರಿ ಬಳಿ ಬೆಳಿಗ್ಗೆಯಿಂದಲೇ ಕನ್ನಡ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದು, ಬೆಂಗಳೂರು- ಮೈಸೂರು ಸಂಚಾರ ಬಂದ್ ಆಗಿದೆ. ಸುಮಾರು 2 ಕಿಲೋ ಮೀಟರ್ ಉದ್ದದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಮಧ್ಯದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.
ನೂರಾರು ಸಂಖ್ಯೆಯಲ್ಲಿದ್ದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಿದ್ದರಿಂದ ಬೆಳಿಗ್ಗೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ ಎನ್ನಲಾಗಿದೆ.