ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ, ನಿರಂತರವಾಗಿ ನಡೆಯುತ್ತಿರುವ ಹೋರಾಟದಿಂದ ಮಂಡ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರ ಸಾಹಸ ನಡೆಸಿದ್ದಾರೆ.
ಮಂಡ್ಯದ ವಿವಿಧ ಕಡೆಗಳಲ್ಲಿ ಕೆ.ಆರ್.ಎಸ್. ಡ್ಯಾಂ ಬಳಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಆದರೂ, ರೈತರು, ವಿವಿಧ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಅನೇಕ ಸರ್ಕಾರಿ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ಪ್ರತಿಭಟನೆಯಲ್ಲಿ ಸರ್ಕಾರಿ ಆಸ್ತಿಗೆ ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಠಾಣೆಯಲ್ಲಿ ಸುಮಾರು 200 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎನ್ನಲಾಗಿದೆ.
ಬಸ್ ಗಳಿಗೆ ಕಲ್ಲು ತೂರಾಟ, ಮಂಡ್ಯ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಲೋಕೋಪಯೋಗಿ ಇಲಾಖೆ ಕಚೇರಿ, ನೀರಾವರಿ ನಿಗಮದ ಕಚೇರಿ ಮೇಲೆ ಕಲ್ಲು ತೂರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಾಗಿದೆ ಎಂದು ಹೇಳಲಾಗಿದೆ.