ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಯಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ.
ಈಗಾಗಲೇ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ ಮಹತ್ವದ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲಾಗಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಐತಿಹಾಸಿಕ ಜಿ.ಎಸ್.ಟಿ. ಮಸೂದೆಗೆ ಸಹಿ ಹಾಕುವ ಮೂಲಕ ಒಪ್ಪಿಗೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
2017 ರ ಏಪ್ರಿಲ್ 1 ರಿಂದ ಜಿ.ಎಸ್.ಟಿ. ಮಸೂದೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮಸೂದೆಗೆ ಈಗಾಗಲೇ 16 ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ಇದೀಗ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದಾರೆ.