ಮಂಡ್ಯ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ, ಇಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.
ಸೋಮವಾರದಿಂದಲೂ ಮಂಡ್ಯದಲ್ಲಿ ಕಾವೇರಿ ಹೋರಾಟದ ಕಾವು ಜೋರಾಗಿದ್ದು, ಸಂಜಯ್ ವೃತ್ತದಲ್ಲಿ ಬೆಳಿಗ್ಗೆಯಿಂದಲೇ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಖಾಲಿ ಕೊಡಗಳನ್ನು ರಸ್ತೆಗೆ ಉರುಳಿಸುವ ಮೂಲಕ, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗೇ ಕುಡಿಯಲು ನೀರಿಲ್ಲ. ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಆಗ್ರಹಿಸಿದ್ದಾರೆ.
ಕನ್ನಡ ಸಂಘಟನೆಯ ಕಾರ್ಯಕರ್ತರೊಬ್ಬರು, ಕೈ ಕೊಯ್ದುಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.