ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಬೆಂಗಳೂರಿನಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ವಾಹನಗಳ ಸವಾರರಿಗೆ ತೆಂಗಿನ ಚಿಪ್ಪು ನೀಡಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ಕನ್ನಡಿಗರಿಗೆ ಚಿಪ್ಪೇ ಗತಿಯಾಗಿದೆ ಎಂದು ಹೇಳಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಕರಾಟೆ ಪಟುಗಳು ಕರಾಟೆ ಪ್ರದರ್ಶನ ನೀಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಬಳ್ಳಾರಿ ಬೈಪಾಸ್ ರಸ್ತೆಯಲ್ಲಿ ಕೆಲವರು ಕಲ್ಲು ತೂರಾಟ ನಡೆಸಿದ್ದು, ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವ 3 ಲಾರಿಗಳಿಗೆ ಕಲ್ಲು ತೂರಿದ್ದಾರೆ. ಕೆಲವು ಕಡೆಗಳಲ್ಲಿ ಜಯಲಲಿತಾ ಭಾವಚಿತ್ರಕ್ಕೆ ಚಪ್ಪಲಿ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ.