ಹಾಸನ: ಕಾಲೇಜು ವಿದ್ಯಾರ್ಥಿನಿಗೆ ಡ್ರಾಪ್ ಕೊಟ್ಟ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.
ಅರಕಲಗೂಡು ತಾಲ್ಲೂಕಿನ ಅಬ್ಬೂರಿನ 18 ವರ್ಷದ ಯುವಕ ಶರಣ್ ಆತ್ಮಹತ್ಯೆ ಮಾಡಿಕೊಂಡವರು. ಶರಣ್ ತಮ್ಮ ಪಕ್ಕದ ಗ್ರಾಮದ ಕಾಲೇಜು ವಿದ್ಯಾರ್ಥಿನಿಗೆ ಬೈಕ್ ನಲ್ಲಿ ಡ್ರಾಪ್ ಕೊಟ್ಟಿದ್ದು, ಇದೇ ವಿಚಾರಕ್ಕೆ ಯುವತಿಯ ಮನೆಯವರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯ ಬಳಿ ಬಂದು ಗಲಾಟೆ ಮಾಡಿದ್ದು, ಇದರಿಂದ ಮನನೊಂದು ಶರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಘಟನೆಯ ನಂತರ, ಬಿಗುವಿನ ಸ್ಥಿತಿ ಉಂಟಾಗಿದ್ದು, ಯುವತಿಯ ಮನೆಯವರು ನಾಪತ್ತೆಯಾಗಿದ್ದಾರೆ. ಕೊಣನೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.