ಶಾಲಾ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಗೆ ಪ್ರೇಮ ಪತ್ರ ಬರೆದು ಇದೀಗ ಜೈಲು ಪಾಲಾಗಿದ್ದಾನೆ. ವಿದ್ಯಾರ್ಥಿಗಳನ್ನು ತಿದ್ದಿ ತೀಡಬೇಕಾದ ಶಿಕ್ಷಕನೇ ತಿಳಿಗೇಡಿ ಕೃತ್ಯ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಾ ಹೊಸಹಳ್ಳಿಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಶಿಕ್ಷಕ ಗುರುಪ್ರಸಾದ್ 13 ವರ್ಷದ ಬಾಲಕಿಗೆ ಪ್ರೇಮ ಪತ್ರ ಬರೆದಿದ್ದಾನೆ.
ಇದೀಗ ಬಾಲಕಿ, ತನ್ನ ಪೋಷಕರ ಜೊತೆ ಖಾನಾ ಹೊಸಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ಗುರುಪ್ರಸಾದ್ ವಿರುದ್ದ ದೂರು ದಾಖಲಿಸಿದ್ದಾಳೆ. ಶಿಕ್ಷಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.