ತಮಿಳುನಾಡಿನಲ್ಲಿ ಕನ್ನಡಿಗರ ಮೇಲಾಗ್ತಿರುವ ಅನ್ಯಾಯದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಈ ನಡುವೆ ಕನ್ನಡಿಗರ ಆಕ್ರೋಶಕ್ಕೆ ಸುಪ್ರೀಂ ಕೋರ್ಟ್ ತೀರ್ಪು ತುಪ್ಪ ಸುರಿದಂತಿದೆ. ಕರ್ನಾಟಕದ ಮೇಲೆ ಸದಾ ಆಗ್ತಿರುವ ಅನ್ಯಾಯದ ವಿರುದ್ಧ ಕನ್ನಡಿಗರು ತಿರುಗಿ ಬಿದ್ದಿದ್ದಾರೆ
ರಾಜ್ಯಕ್ಕೆ ಅನ್ಯಾಯವಾಗ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರು,ಮೈಸೂರು,ಮಂಡ್ಯ ಸೇರಿದಂತೆ ಎಲ್ಲ ಕಡೆ ಪ್ರತಿಭಟನೆಯ ಕಾವು ಜೋರಾಗಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ಜೋರಾಗಿರುವುದರಿಂದ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಕಂಡ ಕಂಡಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಮೈಸೂರಿನಲ್ಲಿ ತಮಿಳುನಾಡಿನ ಮೂರು ಲಾರಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿಎಂ ಸಿದ್ಧರಾಮಯ್ಯ ನಾಳೆ ಸಚಿವ ಸಂಪುಟದ ತುರ್ತು ಸಭೆ ಕರೆದಿದ್ದಾರೆ. ಮುಂದಿನ ನಡೆ ಬಗ್ಗೆ ಚರ್ಚೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ಮಂಡ್ಯದ ಪಾಂಡವಪುರದಲ್ಲಿ ಹಾಲಿನ ಖಾಲಿ ಟ್ರೇ ಸಾಗಿಸ್ತಾ ಇದ್ದ ಲಾರಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಜೋರಾಗ್ತಿದ್ದಂತೆ ಮಂಡ್ಯದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.