ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾವೇರಿ ಕಾವು ಜೋರಾಗಿದೆ. ಬೆಂಗಳೂರಿನ 16 ಕಡೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮನೆಯಿಂದ ಹೊರ ಬರದಂತೆ ಪೊಲೀಸರು ಜನರಿಗೆ ಮನವಿ ಮಾಡ್ತಿದ್ದಾರೆ. ಹೆಗ್ಗನಹಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೊಲೀಸರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಕ್ಕೆ ಅರೆ ಸೇನಾ ಪಡೆಯನ್ನು ಕರೆಸಿಕೊಳ್ಳಲಾಗಿದೆ. ಬಿಬಿಎಂಪಿ, ಕೆ ಎಸ್ ಆರ್ ಟಿ ಸಿ ಸೇರಿದಂತೆ ಎಲ್ಲ ಸರ್ಕಾರಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದ್ರಿಂದಾಗಿ ಮೆಜೆಸ್ಟಿಕ್ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರಯಾಣಿಕರು ಪರದಾಡ್ತಿದ್ದಾರೆ.
ಮಂಡ್ಯ ಹಾಗೂ ಮೈಸೂರಿನಲ್ಲೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.