ಬೆಂಗಳೂರು: ಕಾವೇರಿ ಜಲ ವಿವಾದ ಹಿನ್ನಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ನಾಳೆ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಿಸಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ತೀರ್ಮಾನಕ್ಕೆ ಬಿಡಲಾಗಿದೆ.
ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ) ರಜೆ ಘೋಷಿಸುವ ಅಥವಾ ಶಾಲೆಗಳನ್ನು ನಡೆಸುವ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲು ಸೂಚಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ನಾಳೆ ಶಾಲೆಗಳಿಗೆ ರಜೆ ನೀಡುವ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.