ಶಿವಮೊಗ್ಗ: ಕಾವೇರಿ ನದಿ ನೀರಿನ ವಿಚಾರವಾಗಿ ಶಿವಮೊಗ್ಗದಲ್ಲಿ ಹೋರಾಟ ಮುಂದುವರೆದಿದೆ. ರೈಲು ತಡೆಗೆ ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಕಾವೇರಿ ವಿಚಾರವಾಗಿ ಇಂದು ರಾಜ್ಯದಲ್ಲಿ ರೈಲು ಸಂಚಾರ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ರೈಲು ತಡೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದಿದ್ದಾರೆ.
ರೈಲು ನಿಲ್ದಾಣದೊಳಗೆ ಘೋಷಣೆ ಕೂಗುತ್ತಾ ಆಗಮಿಸಿದ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು, ರೈಲು ತಡೆಯಲು ಮುಂದಾದರು. ಇದಕ್ಕೆ ಅವಕಾಶ ಕೊಡದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.