ಹಾವೇರಿ: ನಗರದ ಹೊರವಲಯದಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ, ಲೋಕಾಯುಕ್ತ ಎಸ್.ಪಿ., ಎಂ.ಬಿ. ಪಾಟೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಬುರಗಿಯಲ್ಲಿ ಎಂ.ಬಿ. ಪಾಟೀಲ್ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿದ್ದು, ಬೆಂಗಳೂರಿಗೆ ಹೊರಟಿದ್ದರು. ಹಾವೇರಿ ಹೊರವಲಯದ ಬೈಪಾಸ್ ಬಳಿ ಟೆಂಪೋ ಟ್ರಾವೆಲ್ಲರ್, ಲಾರಿ ಹಾಗೂ ವೋಲ್ವೋ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿ, ಪಾಟೀಲ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 12 ಮಂದಿಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಸ್ಥಳಕ್ಕೆ ಹಾವೇರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.